52k3 saaruthide srushti

5th std
2nd language kannada
3rd poem
saaruthide srushti



ಹಣ್ಣಿನಲಿ ಬೆಣ್ಣೆಯಲಿ ಕೆನೆಮೊಸರು ಹಾಲಿನಲಿ
ಕಂದದಲಿ ಜೇನಿನಲಿ ರಸಗಬ್ಬು ಬಾಳೆಯಲಿ
ಎಳೆನೀರು ಹೊಳೆನೀರು ಹಾಲ್ದೆನೆಯ ಕಾಳಿನಲಿ
ಸಾರುತಿದೆ ಸೃಷ್ಟಿಯಿದು ಸವಿಯಾಗಿ ನಿಂದು
ಸವಿಯಾಗು ಸವಿಯಾಗು ಸವಿಯಾಗು! ಎಂದು

ತಾರೆಯಲಿ ಚಂದ್ರನಲಿ ಸೂರ್ಯನಲಿ ರನ್ನದಲಿ
ಕಂಚಿನಲಿ ಮಿಂಚಿನಲಿ ಮುತ್ತಿನಲಿ ಚಿನ್ನದಲಿ
ಜ್ಯೋತಿಯಲಿ ನಯನದಲಿ ಉಷೆಯ ಹೊಂಬಣ್ಣದಲಿ
ಸಾರುತಿದೆ ಸೃಷ್ಟಿಯಿದು ಛವಿಯಾಗಿ ನಿಂದು
ಛವಿಯಾಗು ಛವಿಯಾಗು ಛವಿಯಾಗು! ಎಂದು

ಶಬ್ಧದಲಿ ಸವಿಯಾಗಿ ಅರ್ಥದಲಿ  ಬೆಳಕಾಗಿ
ಬಾಳ ಭವ್ಯತೆಗಿಲ್ಲಿ ಬೆಳಕು ಸವಿ ಸಾಕಾಗಿ
ಬಾಳುವೆಯ ಸವಿ ಬೆಳಕ ಬರೆಯುವವ ಬೇಕಾಗಿ
ಸಾರುತಿದೆ ಸೃಷ್ಟಿ ಸವಿ ಛವಿಯಾಗಿ ನಿಂದು
ಕವಿಯಾಗು ಕವಿಯಾಗು ಕವಿಯಾಗು! ಎಂದು

Comments